ಶನಿವಾರಸಂತೆ, ನ. ೨೨: ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಿರುವ ರೈತ ಸಂಭ್ರಮೋತ್ಸವ-೨೦೨೬ರ ರಾಷ್ಟçಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಸಾಹಿತಿ ಹಾಗೂ ಪತ್ರಕರ್ತೆ ಶ.ಗ. ನಯನತಾರಾ ಪ್ರಕಾಶ್ಚಂದ್ರ ಅವರು ರಾಷ್ಟಿçÃಯ ಪತ್ರಿಕೋದ್ಯಮ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಚಿರಾಯು ಕನ್ನಡ ವಾಹಿನಿ, ಧಾರವಾಡದ ಪ್ರತಿಫಲ ಫೌಂಡೇಶನ್ ಹಾಗೂ ಮೈಸೂರಿನ ಅಲೆಯನ್ಸ್ ಇಂಟರ್ನ್ಯಾಷನಲ್ ಕ್ಲಬ್ ಆಫ್ ಕರುನಾಡು ಸಂಸ್ಥೆಗಳ ಸಹಯೋಗದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ೨೪ ವರ್ಷಗಳಿಂದ ಸಲ್ಲಿಸಿರುವ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ನಯನತಾರಾ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ತಾ.೨೯ ರಂದು ಮೈಸೂರಿನ ವಿಜಯನಗರ ಮೊದಲನೇ ಹಂತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಾಹಿತ್ಯ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಚಿರಾಯು ಅಸೋಸಿಯೇಷನ್ನ ಡಾ. ಮಂಜುನಾಥ್ ಎನ್. ಶಿವಕ್ಕನವರ ಹಾಗೂ ಧಾರವಾಡದ ಪ್ರತಿಫಲ ಫೌಂಡೇಶನ್ನ ಸಂಸ್ಥಾಪಕ ಅಧ್ಯಕ್ಷೆ ಪೂಜಾ ಬಡಿಗೇರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.