ಮಡಿಕೇರಿ, ನ. ೨೩: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸರ್ಕಾರಿ ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಸುರಕ್ಷಿತ ಬಾಲ್ಯ ಅಭಿಯಾನದ ಪ್ರಯುಕ್ತ ಶಿಕ್ಷಕರುಗಳಿಗೆ ತರಬೇತಿ ಕಾರ್ಯಾಗಾರವು ತಾ.೨೩ ರಂದು ಬೆಳಿಗ್ಗೆ(ಇಂದು) ೧೦.೧೫ ಗಂಟೆಗೆ ನಗರದ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಎಸ್.ಬಾಗಡೆ, ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್, ೩ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿ.ಸುರೇಂದ್ರ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಸರ್ಕಾರಿ ಅಭಿಯೋಜನಾ ಇಲಾಖೆಯ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್.ರುದ್ರಪ್ರಸನ್ನ ಇತರರು ಪಾಲ್ಗೊಳ್ಳಲಿದ್ದಾರೆ.