ಮಡಿಕೇರಿ, ನ. ೨೩: ನಗರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕಾಮಗಾರಿಯನ್ನು ಮಾಜಿ ಸಚಿವ ಎನ್. ಮಹೇಶ್ ಅವರು ಪರಿಶೀಲಿಸಿದರು. ಪ್ರತಿಮೆ ನಿರ್ಮಾಣದ ಪ್ರಗತಿಯನ್ನು ವೀಕ್ಷಿಸಿದ ಅವರು, ಕಾಮಗಾರಿ ಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಯನ್ನು ಅದ್ಧೂರಿಯಾಗಿ ಅನಾವರಣ ಗೊಳಿಸು ವಂತಾಗಲಿ ಎಂದರು.

ಈ ಸಂದರ್ಭ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಹೆಚ್.ಎಲ್. ದಿವಾಕರ್, ಮಡಿಕೇರಿ ನಗರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ. ಸತೀಶ್, ಲೋಹಿತ್ ಹಾಗೂ ಗಣೇಶ್ ಉಪಸ್ಥಿತರಿದ್ದರು.