ಸುಂಟಿಕೊಪ್ಪ, ನ. ೨೩: ರಾಜ್ಯ ಮಟ್ಟದಲ್ಲಿ ಅನೇಕ ಸಂಘಟನೆಗಳು ಕೆಲಸ ಮಾಡುತ್ತಿದ್ದರೂ, ನಿಜವಾದ ಅರ್ಥದಲ್ಲಿ ಕನ್ನಡದ ಹಿತರಕ್ಷಣೆಯನ್ನು ಇನ್ನೂ ಹೆಚ್ಚಿನ ಮಟ್ಟದಲ್ಲಿ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ ಲೋಕೇಶ್ ಕುಮಾರ್ ತಿಳಿಸಿದರು.
ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ಸುಂಟಿಕೊಪ್ಪದ ಮೀನಾಕ್ಷಮ್ಮ ಮಂಜನಾಥಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಕನ್ನಡ ರಾಜ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡವನ್ನು, ಕನ್ನಡ ಸಾಹಿತ್ಯ, ಭಾಷೆಯನ್ನು, ನಾಡು-ನುಡಿಯನ್ನು ಬೆಳೆಸುವಲ್ಲಿ ಸಾಹಿತ್ಯ ಪ್ರಮುಖ ಸ್ಥಾನ ವಹಿಸಿದೆ ಎಂದರು. ಕನ್ನಡದ ನಿಜವಾದ ರಕ್ಷಣೆಗಾಗಿ ಸ್ವಾಭಿಮಾನದಿಂದ ಕೆಲಸ ಮಾಡಬೇಕಾದ ಅಗತ್ಯವಿದೆ. ಸ್ವಾಭಿಮಾನವಿದ್ದಾಗ ಮಾತ್ರ ಸಂಸ್ಥೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುವುದು ಎಂದು ತಿಳಿಸಿದರು.
ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಮಾತನಾಡಿ, ಸಂಘಟನೆಯ ಬೆಳವಣಿಗೆ ಹಾಗೂ ನಡೆದು ಬಂದ ಹಾದಿಯ ಕುರಿತು ವಿವರಿಸಿದರು.
ಸಮಾರಂಭದಲ್ಲಿ ಜಿಲ್ಲಾಡಳಿತದ ಕಾನೂನು ಸಲಹೆಗಾರ ಎ. ಲೋಕೇಶ್ ಕುಮಾರ್, ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಕಾರ್ಯದರ್ಶಿ ಕೆ.ಎಸ್. ಅನಿಲ್ ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಿನಾಸುದ್ದೀನ್, ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಶರೀಫ್, ರಕ್ತದಾನ ಶಿಬಿರದ ಕಾರ್ಯಕರ್ತರಾದ ಎಂ.ಇ. ಅಬ್ಬಾಸ್, ಕುಂಞ ಮಹಮ್ಮದ್, ಹಿರಿಯ ಆಟೋ ಚಾಲಕರು, ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜಯಂತಿ, ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಗೌಡ, ತಾಲೂಕು ಅಧ್ಯಕ್ಷ ಕೆ.ಎಸ್. ಶಿವ ಹಾಗೂ ೨೦೨೫ - ೨೬ ನೇ ಸಾಲಿನ ೧೦ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಾದ ವೈಷ್ಣವಿ ಆರ್, ಅಜಯ್ ಪಿ.ಆರ್, ನಂದಿನಿ, ಶೋಭಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಯುವ ಘಟಕದ ಅಧ್ಯಕ್ಷ ಕ್ಲಿಫರ್ಡ್ ರಾಡ್ರಿಗಸ್, ಹೋಬಳಿ ಘಟಕದ ಅಧ್ಯಕ್ಷ ಶರೀಫ್ ಎಂ.ಇ., ಪದಾಧಿಕಾರಿಗಳಾದ ಶಹಾದ್, ನಿತಿನ್ ಮಂದಣ, ಮಡೆ ಪೂಜಾರಿ, ರವಿ, ದಿನೀತ್ ಹಾಗೂ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.