ನಾಪೋಕ್ಲು, ನ. ೨೩: ಸಮೀಪದ ಮದೆನಾಡು ಗ್ರಾಮದ ಕಾಟಕೇರಿ ಅಚ್ಚಲ್ಪಾಡಿ ಐನ್ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎ.ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸಿ ಸ್ಥಳೀಯ ಕುಟುಂಬಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ಐನ್ಮನೆಗೆ ತೆರಳುವ ಕುಟುಂಬಸ್ಥರು ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಕ್ಷೇತ್ರದ ಪ್ರತಿಯೊಂದು ಗ್ರಾಮೀಣ ಭಾಗದ ಅಗತ್ಯತೆಗಳಿಗೆ ಸ್ಪಂದಿಸಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಈ ವೇಳೆ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಕಾವೇರಿ ಜಲಾನಯನ ಪ್ರದೇಶ ಅಭಿವೃದ್ಧಿ ಮಂಡಳಿ ನಿರ್ದೇಶಕ ಸೂರಜ್ ಹೊಸೂರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಕೆ.ಎ. ಇಸ್ಮಾಯಿಲ್ ನಾಪೋಕ್ಲು, ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಕೆಪಿಸಿಸಿ ಸದಸ್ಯ ಬೇಕಲ್ ರಾಮನಾಥ್, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಸೌಕತ್, ವಲಯ ಅಧ್ಯಕ್ಷ ಮಜ್ಜಿಗೆಮನೆ ದೀಪಕ್, ಪಟ್ಟಡ ದೀಪಕ್, ಶೈಯದ್ ಅಲಿವಿ, ಆಗಸ್ಟಿನ್ ಜಯರಾಜ್, ಗಣೇಶ್ ಸೋಮಣ್ಣ, ಜಗದೀಶ್, ಸುಬ್ಬಯ್ಯ, ಸುಬ್ರಮಣಿ, ಶಿವಪ್ರಕಾಶ್, ವಿಠಲ ಲಿಂಗರಾಜು ಹಾಗೂ ಅಚ್ಚಲ್ಪಾಡಿ ಕುಟುಂಬದ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.