ನಾಪೋಕ್ಲು, ನ. ೨೩: ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ.

ಬೆಟ್ಟಗೇರಿ ಉದಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಈ ಸ್ಪರ್ಧೆ ಗಳಲ್ಲಿ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ೩೧ ಪ್ರಥಮ, ೮ ದ್ವಿತೀಯ ಹಾಗೂ ೫ ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ. ವಿಜೇತ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.