ಕುಶಾಲನಗರ, ನ. ೨೩: ಹುಣ್ಣಿಮೆ ಅಂಗವಾಗಿ ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ತಾ. ೨೪ ರಂದು ಸಂಜೆ ೫ ಗಂಟೆಗೆ ಮಹಾ ಆರತಿ ಕಾರ್ಯಕ್ರಮ ಜರುಗಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬದ ಪ್ರಯುಕ್ತ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು, ಆರತಿ ಬಳಗದ ಸದಸ್ಯರು ಹಾಗೂ ಕುಶಾಲನಗರ ಕನ್ನಡ ಭಾರತಿ ಪದವಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳ ಸಹಯೋಗ ದೊಂದಿಗೆ ಮಧ್ಯಾಹ್ನ ೩.೩೦ ರಿಂದ ನದಿ ತಟದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಠಲ ಸಾಲಿಯಾನ್, ಉದ್ಯಮಿ ಶರಣ್ ಪೂಣಚ್ಚ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.