ವೀರಾಜಪೇಟೆ, ನ. ೨೩: ವೀರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ರಯಾನ್ ಎಂಬ ವಿದ್ಯಾರ್ಥಿ ತಾ. ೧೦ ರಂದು ಬೇತ್ರಿ ಹೊಳೆಯಲ್ಲಿ ಆಕಸ್ಮಿಕವಾಗಿ ಈಜಲು ತೆರಳಿದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಸಂಭವಿಸಿತ್ತು.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ದುಃಖದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಸದಸ್ಯರಾದ ಮೊಹಮ್ಮದ್ ರಾಫಿ, ಪಕ್ಷದ ಮುಖಂಡರಾದ ಕಲಿಯಂಡ ಸಂಪನ್ ಅಯ್ಯಪ್ಪ, ಕುಂಡಚ್ಚಿರ ಮಂಜು ದೇವಯ್ಯ, ಆಲೀರ ಪವಿಲ್ ಉಸ್ಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.