ಕೋವರ್ಕೊಲ್ಲಿ ಇಂದ್ರೇಶ್
ಬೆAಗಳೂರು, ನ. ೨೪ ರಾಜ್ಯ ಸರ್ಕಾರ ಜಿ.ಪಂ., ತಾ.ಪಂ. ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಪ್ರಕಟಿಸಿದ್ದು, ಜನವರಿಯಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದ ೩೦ ಜಿಲ್ಲೆಗಳ ೧,೧೦೧ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಹಾಗೂ ೨೩೪ ತಾಲೂಕು ಪಂಚಾಯಿತಿಗಳ ೩೫೮೦ ಸದಸ್ಯ ಸ್ಥಾನದ ಮೀಸಲು ನಿಗದಿ ಮಾಡಿ ರಾಜ್ಯ ಸರ್ಕಾರ ಸೋಮವಾರ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದರು.
೨೦೨೨ರಲ್ಲಿಯೇ ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳ ಅವಧಿ ಪೂರ್ಣವಾಗಿತ್ತು. ಹಿಂದಿನ ಸರ್ಕಾರ ಚುನಾವಣೆ ನಡೆಸಿರಲಿಲ್ಲ. ನಮ್ಮ ಸರ್ಕಾರ ಕೆಲವು ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಿದ್ದರಿಂದ ಹಾಗೂ ಕೆಲವು ಗ್ರಾಮ ಪಂಚಾಯಿತಿ ಕ್ಷೇತ್ರಗಳು ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ ಪರಿಣಾಮವಾಗಿ ಕ್ಷೇತ್ರ ಪುನರ್ ವಿಂಗಡಣೆ ಅನಿವಾರ್ಯವಾಗಿತ್ತು. ಹೀಗಾಗಿ ವಿಳಂಬವಾಯಿತು ಎಂದು ತಿಳಿಸಿದರು.
ರಾಜ್ಯ ಸರ್ಕಾರ ತನ್ನ ಕರ್ತವ್ಯ ನಿಭಾಯಿಸಿದ್ದು, ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಿಸಿ ಚುನಾವಣೆ ನಡೆಸಲಿದೆ. ಬಹುತೇಕ ಜನವರಿಯಲ್ಲಿ ಚುನಾವಣೆಗಳು ನಡೆಯಲಿವೆ. ಕಾಂಗ್ರೆಸ್ ಪಕ್ಷ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲು ಸಂಪೂರ್ಣ ಸಜ್ಜಾಗಿದೆ ಎಂದರು. hಣಣಠಿs://eಡಿಚಿರಿಥಿಚಿಠಿಚಿಣಡಿಚಿ.ಞಚಿಡಿಟಿಚಿಣಚಿಞಚಿ.gov.iಟಿ// ನಲ್ಲಿ ಎಲ್ಲ ಅಧಿಸೂಚನೆಗಳೂ ಲಭ್ಯವಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು. ಯಾವ ಮತದಾರರ ಪಟ್ಟಿ ಬಳಕೆ ಎಂಬುದು ಆಯೋಗಕ್ಕೆ ಬಿಟ್ಟದ್ದು. ಹಳೇ ಮತದಾರರ ಪಟ್ಟಿ ಬಳಕೆ ಎಂಬ ಪ್ರಸ್ತಾವನೆ ಸರ್ಕಾರದ್ದಾಗಿದೆ. ಆದ್ರೆ, ಮುಂದಿನ ಪ್ರಕ್ರಿಯೆ ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟದ್ದು ಎಂದರು.
ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸುವ ಸರ್ಕಾರದ ಪಾಲಿನ ಪ್ರಮುಖ ಕರ್ತವ್ಯ ಪೂರ್ಣಗೊಂಡಿದೆ. ಇನ್ನು ಬ್ಯಾಲೆಟ್ ಪೇಪರ್ ಚುನಾವಣೆ ನಡೆಸಲು ಈಗಾಗಲೇ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿದ್ದು, ಈ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೂ ಶಿಫಾರಸ್ಸು ಮಾಡಿದೆ. ಸದ್ಯ ಚುನಾವಣಾ ದಿನಾಂಕ, ನೀತಿ ಸಂಹಿತೆ ಹಾಗೂ ವೇಳಾಪಟ್ಟಿಯನ್ನು ನಿಗದಿಪಡಿಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗ ಮೇಲಿದೆ. ಆಯೋಗವು ದಿನಾಂಕ ಪ್ರಕಟಿಸಿದ ತಕ್ಷಣವೇ ಚುನಾವಣೆಗಳು ಬ್ಯಾಲೆಟ್ ಪೇಪರ್ (ಮತಪತ್ರ) ಮೂಲಕವೇ ನಡೆಯಲಿವೆ. ಕ್ಷೇತ್ರಗಳ ಮೀಸಲಾತಿ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಪ್ರಕಟವಾಗಿದ್ದರಿಂದ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಕಾಂಕ್ಷಿಗಳು ಟಿಕೆಟ್ಗಾಗಿ ತಮ್ಮ ನಾಯಕರ ಬೆನ್ನುಬಿದ್ದಿದ್ದಾರೆ.
ಮಾನವ-ಆನೆ ಸಂಘರ್ಷಕ್ಕೆ “ಆನೆಧಾಮ’’ ಪರಿಹಾರ
ರಾಜ್ಯದ ಕಾಡಿನಂಚಿನ ಗ್ರಾಮಗಳಲ್ಲಿನ ಆನೆ ಮತ್ತು ಮಾನವ ಸಂಘರ್ಷಕ್ಕೆ ಆನೆಧಾಮ (ಇಟeಠಿhಚಿಟಿಣ soಜಿಣ ಡಿeಟeಚಿse ಛಿeಟಿಣeಡಿ) ಪರಿಹಾರವಾಗಬಲ್ಲದು ಎಂದು ಮಾಜಿ ಅರಣ್ಯ ಸಚಿವರೂ ಆಗಿದ್ದ ಈಶ್ವರ ಖಂಡ್ರೆ ಹೇಳಿದರು.
ವಿಕಾಸಸೌಧದಲ್ಲಿಂದು ೬,೩೪೨ ಗ್ರಾಮ ಗ್ರಂಥಾಲಯಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ತಾವು ಈ ಹಿಂದೆ ಅರಣ್ಯ ಸಚಿವನಾಗಿದ್ದಾಗ ಈ ಯೋಜನೆ ರೂಪಿಸಿದ್ದೆ. ಆದರೆ, ಕೇಂದ್ರ ಸರ್ಕಾರ ಹುಲಿ ಸಂರಕ್ಷಿತ ಧಾಮದಲ್ಲಿ ಇದಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ತಿರಸ್ಕರಿಸಿತ್ತು ಎಂದರು.
ತೋಟಗಳಲ್ಲೇ ಹುಟ್ಟಿ, ತೋಟದಲ್ಲೇ ಬೆಳೆಯುವ ಆನೆಗಳಿಂದ ಸಮಸ್ಯೆ ಹೆಚ್ಚಾಗಿದೆ. ಇಂತಹ ಆನೆಗಳನ್ನು ಆನೆಧಾಮದಲ್ಲಿ ಬಿಟ್ಟರೆ ಸಮಸ್ಯೆ ನಿಯಂತ್ರಿಸಬಹುದು ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು. ರಾಮಲಿಂಗಾರೆಡ್ಡಿ ಅವರು ಹಿರಿಯ ಮತ್ತು ಅನುಭವಿ ಸಚಿವರಾಗಿದ್ದು, ಅವರು ಈಗಾಗಲೇ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ಅವರು ಈ ಸಮಸ್ಯೆಗೆ ಪರಿಹಾರ ಒದಗಿಸುತ್ತಾರೆ ಎಂದು ಭರವಸೆ ನೀಡಿದರು.