ಪೊನ್ನAಪೇಟೆ, ನ. ೨೪: ತಾ. ೨೧ರಂದು ಪೊನ್ನಂಪೇಟೆಯ ಬಾರ್‌ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕಾಗಿ

ನಡೆದಿದ್ದ ಚಾಕು ಇರಿತ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತೂಚಮಕೇರಿ ಗ್ರಾಮದ ಚಿಂಡಮಾಡ ದೀಪು ಎಂಬವವರಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬAಧಿಸಿದAತೆ ತಲೆಮರೆಸಿಕೊಂಡಿದ್ದ ಆರೋಪಿ ಹರಿಹರ ಗ್ರಾಮದ ಮನ್ನೆರ ಕಾಳಪ್ಪ ಎಂಬಾತನನ್ನು ಪೊನ್ನಂಪೇಟೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಹಾಗೂ ಗೋಣಿಕೊಪ್ಪಲು ವೃತ್ತ ನಿರೀಕ್ಷಕರ ನಿರ್ದೇಶನದಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆಯ ಎಎಸ್‌ಐ ಹಾಗೂ ಸಿಬ್ಬಂದಿಗಳು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.