ಮಡಿಕೇರಿ, ನ. ೨೪: ನಗರದಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ ನೀಡಿ ಪರಿಶೀಲಿಸಿದರು.
ಮುಖ್ಯಮಂತ್ರಿ ಅವರ ನಗರೋತ್ಥನ ಹಂತ ೪ ರಡಿ ನಗರದ ಕಾವೇರಿ ಕಲಾಕ್ಷೇತ್ರ ಸ್ಥಳದಲ್ಲಿ ಸುಮಾರು ರೂ. ೯.೫೦ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಲಾಭವನ ನಿರ್ಮಾಣ ಕಾಮಗಾರಿ ಪರಿಶೀಲಿಸಿ, ಮಾಹಿತಿ ಪಡೆದರು.
ಬಳಿಕ ಮುಖ್ಯಮಂತ್ರಿ ಅವರ ನಗರೋತ್ಥಾನ ಹಂತ-೪ ರಡಿ ೧.೫೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಾಜಾಸೀಟು ಸಂಪರ್ಕಿಸುವ ಸಿಸಿ ರಸ್ತೆ ಕಾಮಗಾರಿ, ನಗರಸಭೆಯ ಉದ್ದಿಮೆ ನಿಧಿಯಡಿ ಗಾಂಧಿ ಮೈದಾನದಲ್ಲಿ ಸುಮಾರು ರೂ. ೨.೨೪ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಂಗಮAದಿರ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.
ಈ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಜೊತೆಗೆ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸಂಬAಧಪಟ್ಟ ಇಂಜಿನಿಯರ್ಗಳಿಗೆ ಸೂಚಿಸಿದರು. ಅಭಿವೃದ್ಧಿ ಕಾಮಗಾರಿ ಸಂಬAಧಿಸಿದAತೆ ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳು ಬಾರದಂತೆ ಎಂಜಿನಿಯರ್ಗಳು ಎಚ್ಚರವಹಿಸಬೇಕು. ಲೋಪ ಕಂಡುಬAದಲ್ಲಿ ಸಂಬAಧಪಟ್ಟ ಇಂಜಿನಿಯರ್ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.
ವಿವಿಧ ಅಭಿವೃದ್ಧಿ ಕಾಮಗಾರಿ ಬಗ್ಗೆ ಪ್ರತೀ ವಾರ ಮಾಹಿತಿ ಒದಗಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಕಾವೇರಿ ಕಲಾಕ್ಷೇತ್ರ ಬಳಿಯ ಸಂಪಿಗೆ ಮರವನ್ನು ಉಳಿಸಿಕೊಂಡು ಕಾವೇರಿ ಕಲಾಕ್ಷೇತ್ರ ಬಹುಮಹಡಿ ಕಟ್ಟಡ ನಿರ್ಮಿಸಬೇಕು ಎಂದು ಸಲಹೆ ಮಾಡಿದರು.
ಆದಷ್ಟು ರಾಜಾಸೀಟು ಸಿಸಿ ರಸ್ತೆ ಕಾಮಗಾರಿ ಡಿಸೆಂಬರ್ ಮೊದಲ ವಾರದೊಳಗೆ ಪೂರ್ಣಗೊಳಿಸುವಂತೆ ತಾಕೀತು ಮಾಡಿದ ಜಿಲ್ಲಾಧಿಕಾರಿ ನಂತರ ನಗರದಲ್ಲಿರುವ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ ಉಪಾಹಾರ ಸೇವಿಸಿಶುಚಿತ್ವಕ್ಕೆ ಒತ್ತು ನೀಡಬೇಕು. ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.
ಉಪಾಹಾರ ಮತ್ತು ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟ ತಲಾ ೩೦೦ ಮಂದಿಗೆ ವಿತರಿಸಲಾಗುತ್ತದೆ ಎಂದು ಪೌರಾಯುಕ್ತ ಎಚ್.ಆರ್.ರಮೇಶ್ ಅವರು ಮಾಹಿತಿ ನೀಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಮಂಜುನಾಥ್ ರಾಮಣ್ಣ ಅವರು ಕಾಮಗಾರಿ ಪ್ರಗತಿ ಸಂಬAಧಿಸಿದAತೆ ಮಾಹಿತಿ ನೀಡಿದರು.
ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ನಗರಸಭೆ ಎಇಇ ಸತೀಶ್, ಕಿರಿಯ ಅಭಿಯಂತರ ಹೇಮ್ ಕುಮಾರ್, ಗುರುರಾಜ್ ಇತರರು ಇದ್ದರು.