ಮಡಿಕೇರಿ, ನ. ೨೬: ಮೈಸೂರು ಜಯಲಕ್ಷಿö್ಮಪುರಂನಲ್ಲಿರುವ ಮಹಾಜನ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಜಾನಪದ ನೃತ್ಯ ವಿಭಾಗದಲ್ಲಿ ಇಂಚರ ಆನಂದ್ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಮತ್ತು ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಸಂಯುಕ್ತ ಆಶ್ರಯದಲ್ಲಿ ನಡೆದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮೈಸೂರು ವಿಭಾಗದ ಏಳು ಜಿಲ್ಲೆಗಳು ಪಾಲ್ಗೊಂಡಿದ್ದವು. ಈ ಪೈಕಿ ಜಾನಪದ ನೃತ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನದೊಂದಿಗೆ ಇಂಚರ, ಕೊಡಗಿನಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಈಕೆ, ಚಿತ್ತಾರ ವಾಹಿನಿಯ ಪ್ರಧಾನ ಸಂಪಾದಕ ಆನಂದ್ ಕೊಡಗು ಹಾಗೂ ಜಯಂತಿ ದಂಪತಿಯ ಪುತ್ರಿ.

ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ಡಿಸೆಂಬರ್ ೫ರಂದು ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ನಡೆಯಲಿವೆ.