ಶನಿವಾರಸಂತೆ, ನ. ೨೬: ಪಟ್ಟಣದ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತುಗಳ ಮಾದರಿ ತಯಾರಿಕೆ ಹಾಗೂ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ೫ ರಿಂದ ೧೦ ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಸ್ಪರ್ಧೆ ಯಲ್ಲಿ ಪಾಲ್ಗೊಂಡು ವಿಭಿನ್ನ ಮಾದರಿಗಳನ್ನು ತಯಾರಿಸಿ ತಂದು ಪ್ರದರ್ಶಕ್ಕೆ ಇಟ್ಟು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಸ್ಪರ್ಧೆಯನ್ನು ಶ್ರೀ ವಿಘ್ನೇಶ್ವರ ಗೋಲ್ಡನ್ ಶಾಲೆಯ ವಿಜ್ಞಾನ ಶಿಕ್ಷಕಿ ಚಿರಂಜೀವಿ ಹಾಗೂ ಸುಪ್ರಜ ಗುರುಕುಲ ಶಾಲೆಯ ಪ್ರಾಂಶುಪಾಲೆ ಡಿ. ಸುಜಲಾದೇವಿ ಜತೆಯಾಗಿ ಉದ್ಘಾಟಿಸಿ ಪ್ರದರ್ಶನಕ್ಕೆ ಚಾಲನೆ ನೀಡಿದರು. ಸುಜಲಾದೇವಿ ಮಾತನಾಡಿ, ಪ್ರತಿವರ್ಷ ದಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ವಿಜ್ಞಾನೋಪಕರಣಗಳನ್ನು ತಯಾರಿಸುವ ಸ್ಪರ್ಧೆ ಯನ್ನು ಏರ್ಪಡಿಸಲಾಗಿದೆ. ವೈಜ್ಞಾನಿಕ ಚಿಂತನೆಯನ್ನು ಹಾಗೂ ಕ್ರಿಯಾತ್ಮಕತೆಯನ್ನು ಬೆಳೆಸುವ ನಿಟ್ಟಿನಲ್ಲಿ ಕಡ್ಡಾಯ ಮಾಡುತ್ತಿದ್ದು, ಭಾಗವಹಿಸಿದ ಪ್ರತಿ ವಿದ್ಯಾರ್ಥಿಗೂ ಪ್ರಶಂಸನಾ ಬಹುಮಾನ ನೀಡಲಾಗು ತ್ತದೆ. ತರಗತಿವಾರು ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ವಿಜೇತರಿಗೆ ನೀಡಲಾಗುತ್ತಿದೆ. ಪೋಷಕರ ಸಹಕಾರವೂ ಇದೆ ಎಂದರು.