ಕುಶಾಲನಗರ, ನ. ೨೭: ಕುಶಾಲನಗರ ಶ್ರೀ ಗಣಪತಿ ದೇವಾಲಯ ಐತಿಹಾಸಿಕ ರಥೋತ್ಸವ ವಿಶೇಷ ಪೂಜಾ ವಿಧಿ ವಿಧಾನಗಳೊಂದಿಗೆ ಸಾವಿರಾರು ಸಂಖ್ಯೆಯ ಭಕ್ತಾದಿಗಳ ಉಪಸ್ಥಿತಿಯಲ್ಲಿ ಭಕ್ತಿ ಭಾವದಿಂದ ಜರುಗಿತು.
ಕಾರ್ತಿಕ ಮಾಸ ಕೃಷ್ಣ ಪಕ್ಷದಲ್ಲಿ ನಡೆಯುವ ದೇವಾಲಯದ ರಥೋತ್ಸವ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಬೆಳಗ್ಗಿನಿಂದಲೇ ದೇವರಿಗೆ ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ, ಪುಷ್ಪಾಲಂಕಾರ, ರಥ ಪೂಜೆ, ರಥ ಬಲಿ ನಂತರ ಗಣಪತಿ ದೇವರನ್ನು ರಥದಲ್ಲಿ ಪ್ರತಿಷ್ಠಾಪಿಸಿ ಭಕ್ತಾದಿಗಳು ರಥವನ್ನು ರಥ ಬೀದಿಯ ಮೂಲಕ ಆಂಜನೇಯ ದೇವಾಲಯದವರೆಗೆ ಶ್ರದ್ಧಾ ಭಕ್ತಿಯಿಂದ ಎಳೆದರು.
ದೇವಾಲಯದ ಪ್ರಧಾನ ಅರ್ಚಕರಾದ ಆರ್.ಕೆ. ನಾಗೇಂದ್ರ ಬಾಬು ನೇತೃತ್ವದಲ್ಲಿ ರಾಘವೇಂದ್ರ ಭಟ್ ಮತ್ತು ಅರ್ಚಕರ ತಂಡದಿAದ ಪೂಜಾ ವಿಧಿ ವಿಧಾನಗಳು ಜರುಗಿದವು. ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ಜಾತ್ರೋತ್ಸವ ಅಂಗವಾಗಿ ದೇವಾಲಯದ ಒಳ ಆವರಣವನ್ನು ವಿಶೇಷವಾಗಿ ಹೂಗಳಿಂದ ಸಿಂಗರಿಸಲಾಗಿತ್ತು. ರಥ ಎಳೆಯುವುದಕ್ಕೂ ಮುನ್ನ ದೇವಾಲಯ ಮುಂಭಾಗ ಗೋವುಗಳಿಗೆ ಪೂಜೆ ಸಲ್ಲಿಸಲಾಯಿತು. ಅಯ್ಯಪ್ಪ ಸ್ವಾಮಿ ವ್ರತಧಾರಿಗಳು ರಥದ ಮುಂದೆ ಕರ್ಪೂರ ಆರತಿ ಬೆಳಗಿ ಅಯ್ಯಪ್ಪ ಸ್ವಾಮಿ ಘೋಷಣೆ ಕೂಗಿದರು. ಭಕ್ತರು ಹರಕೆಯ ಹೆಸರಿನಲ್ಲಿ ಈಡುಗಾಯಿಯನ್ನು ಒಡೆಯುತ್ತಿದ್ದ ದೃಶ್ಯ ಕಂಡು ಬಂತು.
ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಶ್ರೀ ಗಣಪತಿ ದೇವಾಲಯ ಸಮಿತಿ ಅಧ್ಯಕ್ಷ ಎಂ.ಕೆ. ದಿನೇಶ್ ರಥೋತ್ಸವ ಅದ್ಧೂರಿಯಾಗಿ ನಡೆದಿದೆ. ರಥೋತ್ಸವದ ಅಂಗವಾಗಿ ಅನ್ನದಾನ ಸಮಿತಿ ಮೂಲಕ ಸಾವಿರಾರು ಸಂಖ್ಯೆಯ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿಸಲಾಯಿತು ಎಂದು ಹೇಳಿದರು.
ಪ್ರಧಾನ ಅರ್ಚಕರಾದ ಆರ್.ಕೆ. ನಾಗೇಂದ್ರ ಬಾಬು ಮಾತನಾಡಿ, ರಥೋತ್ಸವ ಅಂಗವಾಗಿ ಪ್ರತಿದಿನ ಪೂಜಾ ಕೈಂಕರ್ಯಗಳನ್ನು ವಿಶೇಷ ರೀತಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಗುಂಡೂರಾವ್ ಜಾತ್ರಾ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಸಾಂಸ್ಕೃತಿಕ ಸಮಿತಿ ಸಂಚಾಲಕ ವಿ.ಪಿ. ಶಶಿಧರ್ ತಿಳಿಸಿದರು.ಯಾವುದೇ ಅಹಿತಕರ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದರು. ದೇವಾಲಯ ಸೇವಾ ಸಮಿತಿಯ ಕಾರ್ಯಕಾರಿ ಮಂಡಳಿ ಉಪಾಧ್ಯಕ್ಷ ಆರ್.ಬಾಬು, ಗೌರವಾಧ್ಯಕ್ಷ ವಿ.ಎನ್. ವಸಂತಕುಮಾರ್, ಕಾರ್ಯದರ್ಶಿ ಬಿ.ಕೆ. ಮುತ್ತಣ್ಣ, ಖಜಾಂಚಿ ಎಸ್.ಕೆ. ಸತೀಶ್, ಸಹ ಕಾರ್ಯದರ್ಶಿ ಕೆ.ಎನ್. ದೇವರಾಜ್, ನಿರ್ದೇಶಕರಾದ ವಿ.ಡಿ. ಪುಂಡರಿಕಾಕ್ಷ, ಹೆಚ್.ಎಂ. ಚಂದ್ರು, ಟಿ.ಆರ್. ಶರವಣಕುಮಾರ್, ಹೆಚ್.ಎನ್. ರಾಮಚಂದ್ರ, ಡಿ. ಅಪ್ಪಣ್ಣ, ಡಿ.ಸಿ. ಜಗದೀಶ್, ಕೆ.ಎನ್. ಸುರೇಶ್, ಕೆ.ಸಿ. ನಂಜುAಡಸ್ವಾಮಿ, ಎಂ. ಮುನಿಸ್ವಾಮಿ, ವಿ.ಎಸ್. ಆನಂದಕುಮಾರ್ ವ್ಯವಸ್ಥಾಪಕ ಎಸ್.ಕೆ. ಶ್ರೀನಿವಾಸ್ ರಾವ್ ಇದ್ದರು. ಹಳೆಯ ಮಾರುಕಟ್ಟೆ ರಸ್ತೆಯ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.