ಮಡಿಕೇರಿ, ನ. ೨೭: ಬೆಂಗಳೂರಿನ ವಿಧಾನಸೌಧದಲ್ಲಿ ತಾ. ೩೦ ರಂದು ಕೆಲವೊಂದು ಮಹತ್ವದ ರಾಜಕೀಯ ದೂರಗಾಮಿ ಪರಿಣಾಮ ಇರುವ ವಿಷಯಗಳು, ಅಂತರರಾಜ್ಯ ಹಾಗೂ ಕೇಂದ್ರ - ರಾಜ್ಯ ಸಂಬAಧಿತ ಸೂಕ್ತ ವಿಷಯಗಳ ಕುರಿತು ಚರ್ಚಿಸಿ ನಿರ್ಧಾರಕೈಗೊಳ್ಳಲು ರಚಿಸಲಾಗಿರುವ ರಾಜಕೀಯ ವ್ಯವಹಾರಗಳ ಸಚಿವ ಸಂಪುಟ ಉಪಸಮಿತಿ ಸಭೆಯನ್ನು ಕರೆಯಲಾಗಿದೆ.
ಈ ಸಭೆ ತಾ. ೩೦ ರಂದು ಬೆಳಿಗ್ಗೆ ೧೦.೩೦ಕ್ಕೆ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಈ ಸಭೆಗೆ ಉಪಮುಖ್ಯಮಂತ್ರಿಗಳ ನಿರ್ದೇಶನದಂತೆ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸಲಾಗಿದೆ ಎಂದು ಸರಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ತಿಳಿಸಿದ್ದಾರೆ.