ನಿವೃತ್ತ ಅಂಚೆ ಪಾಲಕರಿಗೆ ಬೀಳ್ಕೊಡುಗೆ

ಸೋಮವಾರಪೇಟೆ, ಏ. 8: ತೋಳೂರುಶೆಟ್ಟಳ್ಳಿಯ ಅಂಚೆ ಕಚೇರಿಯಲ್ಲಿ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಂ.ಈ. ರಾಮಪ್ಪ ಅವರನ್ನು ಇಲಾಖೆಯ ಸಿಬ್ಬಂದಿಗಳು ಸನ್ಮಾನಿಸಿ, ಬೀಳ್ಕೊಟ್ಟರು. ಪಟ್ಟಣದಲ್ಲಿರುವ ಅಂಚೆ

ಉತ್ತಮ ವಿದ್ಯಾರ್ಥಿ ಪ್ರಶಸ್ತಿ

ಸೋಮವಾರಪೇಟೆ, ಏ. 8: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ಅಜ್ಜಮಕ್ಕಡ ಅಕ್ಷಿತಾ ಕಾರ್ಯಪ್ಪ ಉತ್ತಮ ವಿದ್ಯಾರ್ಥಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಾಲೇಜಿನಲ್ಲಿ ನಡೆದ

ಮಡಿಕೇರಿ, ಏ. 8: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕೊಡಗು ಜಿಲ್ಲಾ ನ್ಯಾಯಾಲಯ ನೌಕರರ ಸಂಘದ ವತಿಯಿಂದ ಮತದಾನದ ಮಹತ್ವ ಹಾಗೂ ವಿದ್ಯುನ್ಮಾನ ಮತಯಂತ್ರ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜಿ. ಎಂ.ಎಂ. ಮಹಾಸ್ವಾಮೀಜಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ವಿದ್ಯುನ್ಮಾನ ಮತಯಂತ್ರದ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿ ಅಗತ್ಯ. ಆ ನಿಟ್ಟಿನಲ್ಲಿ ವಿದ್ಯುನ್ಮಾನ ಮತಯಂತ್ರದ ಬಗ್ಗೆ ಮಾಹಿತಿ ತಿಳಿದುಕೊಳ್ಳುವಂತಾಗಬೇಕು. ಪ್ರಭುದ್ಧ ಸಮಾಜ ನಿರ್ಮಾಣಕ್ಕೆ ಅರ್ಹರೆಲ್ಲರೂ ಮತ ಚಲಾಯಿಸುವಂತಾಗಬೇಕು ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ. ಸತೀಶ್ ಕುಮಾರ್ ಮಾಹಿತಿ ನೀಡಿ, ಇದುವರೆಗೆ ವಿದ್ಯುನ್ಮಾನ ಮತಯಂತ್ರದಲ್ಲಿ ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‍ಗಳು ಬಳಸಲಾಗುತ್ತಿದ್ದು. ಹೊಸದಾಗಿ ವಿವಿ ಪ್ಯಾಟ್ ಒಳಗೊಂಡಿದ್ದು, ಈ ಯಂತ್ರವು ಯಾರಿಗೆ ಮತದಾನ ಮಾಡಲಾಗಿದೆ ಎಂಬದನ್ನು ಖಾತ್ರಿ ಪಡೆಸಿಕೊಳ್ಳುತ್ತದೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಡಿ. ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ ಕುಮಾರ್, ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಶರ್ಮಿಳಾ ಕಾಮತ್, ವಕೀಲರ ಸಂಘದ ಉಪಾಧ್ಯಕ್ಷರಾದ ಕೆ.ಡಿ. ದಯಾನಂದ, ಪ್ರೀತಂ, ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಸಂಘದ ಅಧ್ಯಕ್ಷ ಎಸ್.ಟಿ. ಶಮಿ, ಮಾಸ್ಟರ್ ತರಬೇತುದಾರರಾದ ವಾಲ್ಟರ್ ಡೆಮೆಲ್ಲೋ, ಷಂಶುದ್ದೀನ್, ಜಯಪ್ಪ ಇತರರು ಇದ್ದರು.

ಮಡಿಕೇರಿ, ಏ. 8: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕೊಡಗು ಜಿಲ್ಲಾ ನ್ಯಾಯಾಲಯ ನೌಕರರ ಸಂಘದ ವತಿಯಿಂದ ಮತದಾನದ ಮಹತ್ವ ಹಾಗೂ

ಸಾಮಾಜಿಕ ಮೌಲ್ಯ ಅಳವಡಿಸಿಕೊಳ್ಳಲು ಕರೆ

ಗೋಣಿಕೊಪ್ಪ ವರದಿ, ಏ. 8: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆ ಸಾಮಾಜಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಿವಮೊಗ್ಗ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಪಿ. ನಾರಾಯಣಸ್ವಾಮಿ ಹೇಳಿದರು. ಪೊನ್ನಂಪೇಟೆ ಅರಣ್ಯ

ವಿದ್ಯಾರ್ಥಿಗಳಿಗೆ ‘ಮತದಾನ ಜಾಗೃತಿ’

ವೀರಾಜಪೇಟೆ, ಏ. 8: ಸೈಂಟ್‍ಆನ್ಸ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಮೈಸೂರಿನ ದಿಶಾ ಫೌಂಡೇಷನ್ ಸಹಭಾಗಿತ್ವದಲ್ಲಿ ‘ವಿದ್ಯಾರ್ಥಿಗಳಲ್ಲಿ ಮತದಾನ ಜಾಗೃತಿ’ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.