ತೈಲ-ಬೆಲೆ-ಏರಿಕೆ-ವಿರುದ್ಧ-ಕಾಂಗ್ರೆಸ್-ಪ್ರತಿಭಟನೆ

ಮಡಿಕೇರಿ, ಜೂ. 29: ಪೆಟ್ರೋಲ್-ಡೀಸೆಲ್ ಬೆಲೆ ದೇಶದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವು ದನ್ನು ವಿರೋಧಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಹಾಗೂ ಕಿಸಾನ್ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.ಪ್ರತಿಭಟನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಬಿಜೆಪಿ ಸರಕಾರವು ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಅಧಿಕಾರಕ್ಕೇರುವ ಮುನ್ನ ರೈತ ಪರ ಹಾಗೂ ಜನಪರವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದ ಬಿಜೆಪಿ ಸರಕಾರ, ಅಧಿಕಾರಕ್ಕೆ ಬಂದ ನಂತರ ರೈತ ಹಾಗೂ ಜನವಿರೋಧಿ ಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ದೂರಿದರು.

ತನ್ನ ಖಜಾನೆಯನ್ನು ತುಂಬಿಸಿಕೊಳ್ಳುವ ಸಲುವಾಗಿ ಪೆಟ್ರೋಲ್-ಡೀಸೆಲ್ ಬೆಲೆಗಳನ್ನು ಕೇಂದ್ರ ಸರಕಾರ ಏರಿಕೆ ಮಾಡುತ್ತಿದ್ದು, ಜನ ಸಾಮಾನ್ಯರ ಮೇಲೆ ಸವಾರಿ ಮಾಡುತ್ತಿದೆ ಇದು ಖಂಡನೀಯ ಎಂದರು. ರಾಜ್ಯದ ಬಿಜೆಪಿ ಸರಕಾರ ಭೂಸುಧಾರಣಾ ಕಾಯ್ದೆ ಸೇರಿದಂತೆ ಹಲವು ಕಾನೂನುಗಳನ್ನು ಏಕಪಕ್ಷೀಯವಾಗಿ ತಿದ್ದುಪಡಿ ಮಾಡುವ ಮೂಲಕ ರಾಜ್ಯದ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡುತ್ತಿದೆ ಎಂದು ವೀಣಾ ಅಚ್ಚಯ್ಯ ಟೀಕಿಸಿದರು.ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮಾತನಾಡಿ, ನೆರೆ ಹೊರೆಯ ರಾಷ್ಟ್ರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಅತೀ ಕಡಿಮೆ ದರಕ್ಕೆ ಸಿಗುತ್ತಿದೆ. ಆದರೆ ಭಾರತದಲ್ಲಿ ಮಾತ್ರ ಇವುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿದ್ದು, 
(ಮೊದಲ ಪುಟದಿಂದ) ದೇಶದ ಜನರನ್ನು ಕೇಂದ್ರ ಸರಕಾರ ಲೂಟಿ ಮಾಡಲು ಹೊರಟಂತಿದೆ ಎಂದು ಆರೋಪಿಸಿದರು. ವಿದ್ಯುತ್ ನಿಗಮದ ಖಾಸಗೀಕರಣವೂ ಖಂಡನೀಯ ಎಂದು ಹೇಳಿದರು.
ಕಿಸಾನ್ ಕಾಂಗ್ರೆಸ್ ಪ್ರಮುಖ ನೆರವಂಡ ಉಮೇಶ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು.
ಎನ್‍ಐಟಿಯುಸಿ ಮುಖಂಡ ನಾಪಂಡ ಮುತ್ತಪ್ಪ ಮಾತನಾಡಿ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ ಎಂದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ, ಕಾಂಗ್ರೆಸ್ ವಕ್ತಾರ ಟಾಟು ಮೊಣ್ಣಪ್ಪ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಉಸ್ಮಾನ್, ವಕ್ಛ್ ಬೋರ್ಡ್ ಅಧ್ಯಕ್ಷ ಯಾಕೂಬ್, ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ, ಜಿಲ್ಲಾ ಕಾಂಗ್ರೆಸ್ ಖಜಾಂಚಿ ನಂದಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಫ್ಯಾನ್ಸಿ, ಯುವ ಕಾಂಗ್ರೆಸ್ ಅಧ್ಯಕ್ಷ ಸದಾ ಮುದ್ದಪ್ಪ, ನಗರಸಭಾ ಮಾಜಿ ಸದಸ್ಯರುಗಳಾದ ಚುಮ್ಮಿ ದೇವಯ್ಯ, ಅಬ್ದುಲ್ ರಜಾಕ್, ಜುಲೇಕಾಬಿ, ಹಾಕತ್ತೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಮೇಕೇರಿ ಹನೀಫ್, ಡಿಸಿಸಿ ಸದಸ್ಯ ಪುಷ್ಪ ಪೂಣಚ್ಚ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ತೆನ್ನೀರಾ ಮೈನಾ ಮತ್ತಿತರರು ಹಾಜರಿದ್ದರು. ಬಳಿಕ ಎಡಿಸಿ ಸ್ನೇಹಾ ಅವರಿಗೆ ಮನವಿ ಸಲ್ಲಿಸಲಾಯಿತು.

Home    About us    Contact